ಮಂಗಳೂರು: ವಾಹನಕ್ಕೆ ಸೈಡ್ ಕೊಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಂಗಳೂರಿನ ರಸ್ತೆಯೊಂದರಲ್ಲಿ ನಡೆದ ಹೊಡೆದಾಟ ವ್ಯಾಪಕವಾಗಿ ವೈರಲ್ ಆಗುತ್ತಿದೆ.
ಟ್ರಾಫಿಕ್ ಜಾಮ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ಮಂಗಳೂರಿನ ಪಂಪ್ವೆಲ್ ನಿಂದ ಕಂಕನಾಡಿ ಸಂಪರ್ಕಿಸುವ ರಸ್ತೆಯಲ್ಲಿ ನಡೆದಿದೆ.
ವಾಹನಕ್ಕೆ ಸೈಡ್ ಕೊಡುವ ವಿಚಾರಕ್ಕೆ ಆಟೋ ಚಾಲಕ ಮತ್ತು ಕಾರು ಪ್ರಯಾಣಿಕರ ಮಧ್ಯೆ ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಅದೇ ಮಾರ್ಗವಾಗಿ ಬಂದ ಅಂಬ್ಯುಲೆನ್ಸ್ ಗೂ ದಾರಿ ನೀಡದೆ ಗುಂಪು ಹೊಡೆದಾಡಿಕೊಂಡಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಪೊಲೀಸರು ಅಗಸ್ಟ್ 1 ರಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಳಿಕ ಗಲಾಟೆ ಮಾಡಿದವರೇ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.