ಹಿಂದೂ ಕಾರ್ಯಕರ್ತರ ವಿರುದ್ಧ ಪೊಲೀಸ್ ದೌರ್ಜನ್ಯ ಆರೋಪ: ಹಿಂಜಾವೇಯಿಂದ ಜೈಲ್‌ಭರೋ ಎಚ್ಚರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹಿಂದೂ ಸಾಮಾಜಿಕ ಕಾರ್ಯಕರ್ತರ ವಿರುದ್ಧ ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಿ, ಗಡಿಪಾರು ನೋಟಿಸ್ ಹಾಗೂ ಬಾಂಡ್ ನೀಡುವಂತೆ ಒತ್ತಾಯಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಜೈಲ್‌ಭರೋ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದೆ.

ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂಜಾವೇ ಪ್ರಾಂತ ಕಾರ್ಯಕಾರಿಣಿ ಸದಸ್ಯ, ವಕೀಲ ಕಿಶೋರ್‌ಕುಮಾರ್ ಕೋಡಿಕಲ್, ಪುತ್ತೂರಿನ ವಿವಿಧ ಪ್ರಕರಣಗಳಲ್ಲಿ ಸಂಘಟನೆಯ ಪ್ರಮುಖರ ವಿರುದ್ಧ ವಿಳಂಬವಾಗಿ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತರಿಗೆ ನೋಟಿಸ್ ನೀಡಿ, ರಾತ್ರಿ ವೇಳೆ ಮನೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ತೆರಳಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು. ಪೊಲೀಸ್ ಇಲಾಖೆ ಈ ಕ್ರಮಗಳ ಕುರಿತು ಪರಿಶೀಲನೆ ನಡೆಸಿ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಹಿಂಜಾವೇ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ, ಸಹ ಸಂಯೋಜಕ ಪ್ರದೀಪ್ ಅಜ್ಜಿಬೆಟ್ಟು, ದಿನೇಶ್ ಪಂಜಿಗ ಹಾಗೂ ಸುಧೀಂದ್ರ ಪ್ರಕಾಶ್ ಮಂಗಳಾದೇವಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!