ಮಂಗಳೂರು: ತಮಿಳ್ ಮರುತ್ತುವರ್ ಸಮೂಹಂ (ರಿ.), ದಕ್ಷಿಣ ಕನ್ನಡ ಜಿಲ್ಲೆ ಇದರ 10ನೇ ವರ್ಷದ ಸಮಾರಂಭ ಅಕ್ಟೋಬರ್ 27ರಂದು ಮಂಗಳವಾರ ಬೆಳಿಗ್ಗೆ 10.30ಕ್ಕೆ ತೊಕ್ಕೊಟ್ಟು ಒಳಪೇಟೆಯ ಕ್ಲಿಕ್ ಹಾಲ್ನಲ್ಲಿ ನಡೆಯಲಿದೆ.

ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸಮಾರಂಭ ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಸಹ್ಯಾದ್ರಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಟಿ. ಸುವರ್ಣ ಹಾಗೂ ಮಂಗಳೂರು ಲೆಕ್ಸ್ ಜೂರಿಸ್ ಲಾ ಚೇಂಬರ್ನ ವಕೀಲ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಮಹಮ್ಮದ್ ಅಸ್ಗರ್ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಕೈಗಾರಿಕೋದ್ಯಮಿ ಶ್ರೀಕಾಂತ್ ವೆಂಕಟಸ್ವಾಮಿ, ತಮಿಳುನಾಡು ಮರುತ್ತುವರ್ ಸಮಾಜದ ಅಧ್ಯಕ್ಷ ಕೆ.ಟಿ. ರಘುಪತಿ, ಕೇರಳ ಮರುತ್ತುವರ್ ಸಮಾಜದ ಅಧ್ಯಕ್ಷ ಪಿ. ಸೆಲ್ವ ರಾಜ್ ಹಾಗೂ ಪುದುಚೇರಿ ಮರುತ್ತುವರ್ ಸಮಾಜದ ಅಧ್ಯಕ್ಷ ಎಲ್. ರಾಜ ಪಾಲ್ಗೊಳ್ಳಲಿದ್ದಾರೆ.
ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಸಮೂಹದ ಅಧ್ಯಕ್ಷ ಕುಮಾರ್ ಪಿ. ಸಾಲತ್ತೂರು ಹಾಗೂ ಸರ್ವ ಸದಸ್ಯರು ಮನವಿ ಮಾಡಿದ್ದಾರೆ. ಕಾರ್ಯಕ್ರಮವನ್ನು ಪ್ರವೀಣ್ ಎಸ್. ಕುಂಪಲ ನಿರೂಪಿಸಲಿದ್ದಾರೆ.

