ಕುರ್ನಾಡು ಪೆಟ್ರೋಲ್ ಪಂಪ್ ಬಳಿ ಭೀಕರ ಅಪಘಾತ: ಇಬ್ಬರು ಯುವಕರು ಸಾವು

ಕೊಣಾಜೆ: ಬೋಳಿಯಾರ್ ಸಮೀಪದ ಕುರ್ನಾಡು ಪಡೀಲ್ ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಕಿನ್ಯ ಅರೆಬಿನಗರದ ಮಹಮ್ಮದ್ ಅರ್ಫಾಝ್ (22) ಹಾಗೂ ಕಿನ್ಯ ಉಕ್ಕುಡ ನಿವಾಸಿ ಜುನೈದ್ (23) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ ಸಂಜೆ ಬೋಳಿಯಾರ್ ಕಡೆಯಿಂದ ಮುಡಿಪು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕುರ್ನಾಡು ಪಡೀಲ್ ಪೆಟ್ರೋಲ್ ಪಂಪ್ ಬಳಿ ಹಿಂಬದಿಯಿಂದ ಬಂದ ಪಿಕಪ್ ಢಿಕ್ಕಿ ಹೊಡೆದಿದೆ. ಜುನೈದ್ ಕಲ್ಲಾಪು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದರೆ, ಅರ್ಫಾಝ್ ಮುಂಬೈನಲ್ಲಿ ಉದ್ಯೋಗದಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದರು ಎನ್ನಲಾಗಿದೆ.

ಅಪಘಾತದ ಬಳಿಕ ಪಿಕಪ್ ಚಾಲಕ ವಾಹನ ನಿಲ್ಲಿಸಿ, ಬಾಗಿಲು ತೆರೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

SHARE
Loading spinner

One thought on “ಕುರ್ನಾಡು ಪೆಟ್ರೋಲ್ ಪಂಪ್ ಬಳಿ ಭೀಕರ ಅಪಘಾತ: ಇಬ್ಬರು ಯುವಕರು ಸಾವು”

Leave a Reply

Your email address will not be published. Required fields are marked *

error: Content is protected !!