ಪುತ್ತೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೊಯಿಲತ್ತಡ್ಕ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಡೆದಿದೆ.

ದಿನಾಂಕ 19-10-2026ರಂದು ರಾತ್ರಿ ಸುಮಾರು 8:30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ವ್ಯಕ್ತಿಯ ಗುರುತು ಹಾಗೂ ವಿಳಾಸದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಗುರುತಿಸಬಲ್ಲವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಸಂಪರ್ಕ ವಿವರಗಳು:
- ಪೊಲೀಸ್ ನಿರೀಕ್ಷಕರು: 9480805363
- ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ: 08251-232102
ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಕೋರಿದ್ದಾರೆ.




The VIP experience is legit. I feel like a valued player every time I log in. Big thanks to 2uuu88viplogin for the amazing service.