ಮಂಗಳೂರಿನಲ್ಲಿ ದಾಂಡಿಯಾ ಕಾರ್ಯಕ್ರಮದ ವಿರುದ್ಧ ದೂರು: ಆಯೋಜಕರ ವಿರುದ್ಧ ಕ್ರಮಕ್ಕೆ ವಿಎಚ್‌ಪಿ ಆಗ್ರಹ

ಮಂಗಳೂರು: ನಗರದ ಸುಲ್ತಾನ್ ಬತ್ತೇರಿಯಲ್ಲಿರುವ ‘ಎಡ್ಜ್ ವಾಟರ್’ನಲ್ಲಿ ನಡೆದ ದಾಂಡಿಯಾ ಕಾರ್ಯಕ್ರಮದ ಹೆಸರಲ್ಲಿ ಅಸಭ್ಯ ನೃತ್ಯ ಹಾಗೂ ಅಶ್ಲೀಲ ಗಾಯನ ನಡೆಸಲಾಗಿದೆ ಎಂದು ಆರೋಪಿಸಿ, ವಿಶ್ವ ಹಿಂದೂ ಪರಿಷತ್‌ನ ದುರ್ಗಾವಾಹಿನಿ ವತಿಯಿಂದ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ನವರಾತ್ರಿ ಹಬ್ಬದ ದಾಂಡಿಯಾ ಕಾರ್ಯಕ್ರಮದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ವಿಎಚ್‌ಪಿ ಆರೋಪಿಸಿದೆ.

ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿದವರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಆಗ್ರಹಿಸಿದ್ದಾರೆ.ಈ ಸಂಬಂಧ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವಂತೆ ವಿಎಚ್‌ಪಿ ಒತ್ತಾಯಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!