ಉಮ್ರಾ ಯಾತ್ರಿಕರ ವಿಮಾನ ಸೌಲಭ್ಯ ಸಮಸ್ಯೆ ಪರಿಹಾರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಭರವಸೆ

ಮಂಗಳೂರು: ಸೌದಿ ಅರೇಬಿಯಾದ ಮಕ್ಕಾಕ್ಕೆ ಉಮ್ರಾ ಯಾತ್ರೆ ಕೈಗೊಳ್ಳಲು ತೆರಳಿರುವ ಹಾಗೂ ತೆರಳಲು ಸಿದ್ಧರಾಗಿರುವ ಅನೇಕ ಭಾರತೀಯ ಯಾತ್ರಿಕರು ವಿಮಾನ ಸೌಲಭ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಅವರಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು, ಕೇಂದ್ರ ವಿದೇಶಾಂಗ ಸಚಿವಾಲಯದೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಯ ಕುರಿತು ಗಮನ ಸೆಳೆದಿದ್ದಾರೆ. ಅಲ್ಲದೆ, ಈ ಸಂಬಂಧ ಪತ್ರದ ಮೂಲಕವೂ ಮನವಿ ಸಲ್ಲಿಸಿ, ಸಂಕಷ್ಟದಲ್ಲಿರುವ ಯಾತ್ರಿಕರಿಗೆ ಅಗತ್ಯ ನೆರವು ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಈಗಾಗಲೇ ಉಮ್ರಾ ಯಾತ್ರೆ ಆಯೋಜಿಸುವ ಟ್ರಾವೆಲ್ಸ್ ಸಂಸ್ಥೆಗಳ ಪ್ರತಿನಿಧಿಗಳೂ ಈ ಸಮಸ್ಯೆಯ ಕುರಿತು ಮನವಿ ಸಲ್ಲಿಸಿದ್ದು, ಅವರ ಮನವಿಗೂ ಸ್ಪಂದಿಸಿರುವುದಾಗಿ ಸಂಸದರು ತಿಳಿಸಿದ್ದಾರೆ. ವಿದೇಶದಲ್ಲಿರುವ ಭಾರತೀಯರ ಸುರಕ್ಷತೆ ಮತ್ತು ಹಿತಾಸಕ್ತಿಗಳ ರಕ್ಷಣೆಗೆ ತಾವು ಬದ್ಧರಾಗಿದ್ದು, ಯಾತ್ರಿಕರ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಅಗತ್ಯ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾಧ್ಯಕ್ಷರಾದ ಟಿ. ಎ. ಶಾನವಾಜ್, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಅಲ್ಪಸಂಖ್ಯಾತರ ಮೋರ್ಚಾದ ಪ್ರಭಾರಿ ಸಂಜಯ್ ಪ್ರಭು, ಉಪಾಧ್ಯಕ್ಷರಾದ ಮಹಮ್ಮದ್ ಅಸ್ಗರ್, ಪ್ರಧಾನ ಕಾರ್ಯದರ್ಶಿ ಎ. ಕೆ. ಜಮಾಲ್, ಕಾರ್ಯದರ್ಶಿ ಶಕೀರ್ ಕಣ್ಣೂರು, ಮಂಗಳೂರು ಮಂಡಲದ ಅಧ್ಯಕ್ಷರಾದ ಸಿದ್ದಿಕ್ ತಲಪಾಡಿ, ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಕರೀಂ ಉಚ್ಚಿಲ್ , ಮುಖಂಡರಾದ ರಹಮತ್ ಅಲಿ ಕಿನ್ಯ, ಫಯಾಜ್ ಬಜ್ಪೆ, ಸಲೀಂ ಬೇಗಾರೆ, ರಜಾಕ್ ಸೋಮೇಶ್ವರ, ಆರಿಸ್ ಸೋಮೇಶ್ವರ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

SHARE
Loading spinner

One thought on “ಉಮ್ರಾ ಯಾತ್ರಿಕರ ವಿಮಾನ ಸೌಲಭ್ಯ ಸಮಸ್ಯೆ ಪರಿಹಾರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಭರವಸೆ”

Leave a Reply

Your email address will not be published. Required fields are marked *

error: Content is protected !!