ಮಂಗಳೂರು: ನಗರದ ಕೊಟ್ಟಾರ ಚೌಕಿಯ ಶ್ರೀ ಸಾಯಿ ನಿವಾಸದಲ್ಲಿ ವಾಸವಾಗಿದ್ದ ಶಾಂತಲಾ (45) ಮತ್ತು ಅವರ ಪುತ್ರಿ ನಿಶಿತಾ (12) ಅಕ್ಟೋಬರ್ 1ರಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತಲಾ ಅವರು ಸುಮಾರು 5 ಅಡಿ 5 ಇಂಚು ಎತ್ತರವಿದ್ದು, ಗೋಧಿ ಮೈಬಣ್ಣ, ಉದ್ದನೆಯ ಕಪ್ಪು ಕೂದಲು ಹಾಗೂ ದುಂಡು ಮುಖ ಹೊಂದಿದ್ದಾರೆ. ಕನ್ನಡ, ತುಳು, ಇಂಗ್ಲಿಷ್ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ನಾಪತ್ತೆಯಾದ ದಿನ ಕೆಂಪು, ಹಳದಿ, ನೀಲಿ ಮಿಶ್ರಿತ ಚೂಡಿದಾರ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾವೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

