ಮಂಗಳೂರು: ಆರ್ಯ ಜೆಸಿಐ ವತಿಯಿಂದ ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಆಯೋಜಿಸಲಾದ ಎರಡು ದಿನಗಳ ಜೆಸಿಐ ವಲಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಲ್ ಮುಝೈನ್ ಕಂಪನಿಯ ಸಿಇಒ ಝಕರಿಯಾ ಜೋಕಟ್ಟೆ ಅವರಿಗೆ ‘ವರ್ಷದ ವ್ಯಕ್ತಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಮ್ಮೇಳನದಲ್ಲಿ ಜೆಸಿಐ ವಲಯದ ವಿವಿಧ ಪದಾಧಿಕಾರಿಗಳು, ಗಣ್ಯರು ಹಾಗೂ ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಅವರ ಸೇವೆ ಹಾಗೂ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.

