ಮಂಗಳೂರು: ಎಸ್ಐಆರ್ ವಿರುದ್ದ ಪ್ರತಿಭಟನಾ ಕಾವು ರಾಜ್ಯದ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸಿದ್ದು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲ್ಲೂಕಿನ ಕೆ.ಸಿ ರೋಡ್ ಜಂಕ್ಷನ್ ನಲ್ಲಿ ಎಸ್ಐಆರ್ ವಿರುದ್ದ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ತಿರಂಗಾ ಜಾಥಾ ಹಾಗೂ ಪ್ರತಿಭಟನಾ ಸಮಾವೇಶ ನಡೆಯಿತು.

ಜನತಂತ್ರದ ರಕ್ಷಣೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಸಂಯುಕ್ತ ನಾಗರಿಕ ವೇದಿಕೆ, ಉಳ್ಳಾಲ ಇದರ ನರತೃತ್ವದಲ್ಲಿ ನಡೆದ ಹೋರಾಟದಲ್ಲಿ ಮುಖ್ಯ ಅತಿಥಿಗಳಾಗಿ ಹೋರಾಟಗಾತಿ, ಗಾಯಕಿ ನೇಹಾ ಸಿಂಗ್ ರಾಥೋಡ್ ಭಾಗವಹಿಸಿ ಹೋರಾಟದ ಗೀತೆಗಳ ಮೂಲಕ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಗುಡುಗಿದರು.
ಪ್ರತಿಭಟನಾ ಸಮಾವೇಶದಲ್ಲಿ ವಿವಿದ ಸಂಘಟನೆಗಳ ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ನಾಯಕರು ಭಾಗವಹಿಸಿದ್ದರು. ಕಾರಗಯಕ್ರಮಕ್ಕೂ ಮುನ್ನ ಪ್ರತಿಭಟನಾಕಾರರಿಂದ ಬೃಹತ್ ತಿರಂಗಾ ಮೆರವಣಿಗೆ ನಡೆಯಿತು.

