ಪಾಂಡೇಶ್ವರ ರೈಲ್ವೆ ಕ್ರಾಸಿಂಗ್‌ನಲ್ಲಿ ಮುರಿದು ಬಿದ್ದ ಗೇಟ್; ರೈಲ್ವೆ ಇಲಾಖೆ ವಿರುದ್ಧ ಆಕ್ರೋಶ

ಮಂಗಳೂರು: ನಗರದ ಪಾಂಡೇಶ್ವರ ರೈಲ್ವೆ ಕ್ರಾಸಿಂಗ್‌ನಲ್ಲಿ ತುಕ್ಕು ಹಿಡಿದಿದ್ದ ರೈಲ್ವೆ ಗೇಟ್ ಮುರಿದು ಬಿದ್ದ ಘಟನೆ ನಡೆದಿದೆ.

ಈಗಾಗಲೇ ತೀವ್ರ ಸಂಚಾರ ದಟ್ಟಣೆಯಿಂದಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಪಾಂಡೇಶ್ವರ ರೈಲ್ವೆ ಕ್ರಾಸಿಂಗ್‌ನಲ್ಲಿ ಇದೀಗ ಗೇಟ್ ಮುರಿದು ಬಿದ್ದಿರುವುದು ಆತಂಕಕ್ಕೆ ಕಾರಣವಾಗಿದೆ.

ಗೇಟ್ ನಿರ್ವಹಣೆಯಲ್ಲಿ ರೈಲ್ವೆ ಇಲಾಖೆ ತೋರಿದ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈಲ್ವೆ ಕ್ರಾಸಿಂಗ್‌ನ ಗೇಟ್‌ಗಳ ಸುರಕ್ಷತೆ ಹಾಗೂ ನಿರ್ವಹಣೆಗೆ ಆದ್ಯತೆ ನೀಡಬೇಕು. ಮುರಿದು ಬಿದ್ದ ಗೇಟ್‌ನ್ನು ತಕ್ಷಣ ದುರಸ್ತಿಗೊಳಿಸಿ, ಇಂತಹ ಘಟನೆಗಳು ಮರುಕಳಿಸದಂತೆ ರೈಲ್ವೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!