ಸಹಕಾರ ಭಾರತಿಯ ಉಳ್ಳಾಲ ತಾಲೂಕು ಸಮಿತಿ ರಚನೆ: ಅಧ್ಯಕ್ಷರಾಗಿ ನಿಶ್ಚಲ್ ಜಿ. ಶೆಟ್ಟಿ ಆಯ್ಕೆ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿಯ ಅಧ್ಯಕ್ಷ ಸುಧಾಕರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಹಕಾರ ಭಾರತಿಯ ಉಳ್ಳಾಲ ತಾಲೂಕು ಸಮಿತಿಯನ್ನು 19 ಸದಸ್ಯರನ್ನು ಒಳಗೊಂಡಂತೆ ಪೂರ್ಣ ಪ್ರಮಾಣದಲ್ಲಿ ರಚಿಸಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ನಿಶ್ಚಲ್ ಜಿ. ಶೆಟ್ಟಿ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಬಗಂಬಿಲ, ಸಂಘಟನಾ ಕಾರ್ಯದರ್ಶಿಯಾಗಿ ಪ್ರೇಮಾನಂದ ರೈ ಹಾಗೂ ಮಹಿಳಾ ಪ್ರಮುಖ್ ಆಗಿ ದಿನಮಣಿ ರಾವ್ ಜವಾಬ್ದಾರಿ ವಹಿಸಿಕೊಂಡರು.

ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಅವರು ಸಹಕಾರ ಭಾರತಿಯ ಬೆಳವಣಿಗೆಯ ಹಾದಿ ಹಾಗೂ ತಾಲೂಕು ಸಮಿತಿಯ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.

ನೂತನ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಅಭಿನಂದನೆ ಸಲ್ಲಿಸಿ, ಸಂಘಟನೆಯ ಬಲವರ್ಧನೆಗೆ ಶ್ರಮಿಸುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿಯ ಉಪಾಧ್ಯಕ್ಷರಾದ ಕೆ.ವಿ. ಪ್ರಸಾದ್, ವಿಶ್ವನಾಥ್ ಹಾಗೂ ಕೋಶಾಧಿಕಾರಿ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!