ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: – 100 LSD ಡ್ರಗ್ಸ್ ಸ್ಟ್ರಿಪ್ ಗಳ ವಶ, ಇಬ್ಬರ ಬಂಧನ

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು LSD (Lysergic Acid Diethylamide) ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಬಂಧಿಸಿ, ಅವರುಗಳಿಂದ ಸುಮಾರು ₹ 3 ಲಕ್ಷ ಮೌಲ್ಯದ 100 ಡ್ರಗ್ಸ್ ಸ್ಟ್ರಿಪ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.


ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಡ್ರಗ್ಸ್ ಸ್ಟ್ರಿಪ್ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಿನಾಂಕ 03-11-2026 ರಂದು ಮದ್ಯಾಹ್ನ ಮಂಗಳೂರು ನಗರದ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಸುಮಾರು ₹ 3,00,000 ಮೌಲ್ಯದ 100 ಡ್ರಗ್ಸ್ ಸ್ಟ್ರಿಪ್ ಹಾಗೂ 3 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 3,35,000/- ಆಗಿರುತ್ತದೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

ಆರೋಪಿತರುಗಳ ವಿವರ.

  1. ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್, ಪ್ರಾಯ: 30 ವರ್ಷ, ವಾಸ: ಪ್ಲ್ಯಾಟ್ ನಂಬ್ರ 802, ತುಂಬೆ ಪ್ಲಾಜಾ, ಮಂಗಳೂರು ಸಾಮಿಲ್ ಹತ್ತಿರ, ಅಳಪೆ, ಪಡೀಲ್, ಮಂಗಳೂರು.
  2. ಸಿದ್ದಾರ್ಥ ಶೆಟ್ಟಿ ಪ್ರಾಯ: 35 ವರ್ಷ, ವಾಸ: ಡೋರ್ ನಂ: 1-6-487/6, EMILAY MANSION ಅಪಾರ್ಟ್ ಮೆಂಟ್, ದಡ್ಡಲ್ ಕಾಡ್, ಉರ್ವಸ್ಟೋರ್, ಮಂಗಳೂರು
    ಆರೋಪಿ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ ಎಂಬಾತನ ವಿರುದ್ಧ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಮಾರಾಟ ಮಾಡಿದ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಆರೋಪಿ ಸಿದ್ದಾರ್ಥ ಶೆಟ್ಟಿ ಎಂಬಾತನ ವಿರುದ್ಧ ಮಂಗಳೂರು ನಗರದ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ, ಗಾಂಜಾ ಮಾರಾಟ ಸೇರಿದಂತೆ ಒಟ್ಟು 09 ಪ್ರಕರಣಗಳು ದಾಖಲಾಗಿರುತ್ತವೆ.
    ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!