ಅಗಲಿದ ಹಿರಿಯ ಪತ್ರಕರ್ತರಾದ ರಾಮಚಂದ್ರ ರಾವ್, ಜೆ.ಕೆ.ರೈಯವರಿಗೆ ನುಡಿನಮನ

ಮಂಗಳೂರು,ನ.6;ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ (ರಿ).ಮಂಗಳೂರು ಪ್ರೆಸ್ ಕ್ಲಬ್ , ಪತ್ರಿಕಾಭವನ ಟ್ರಸ್ಟ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿಂದು ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ರಾದ ರಾಮಚಂದ್ರ ರಾವ್ ಮತ್ತು ಸುಳ್ಯದ ಜೆ.ಕೆ.ರೈ ಯವರ ನಿಧನಕ್ಕೆ
ನುಡಿನಮನದೊಂದಿಗೆ ಸಂತಾಪ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿಸದಸ್ಯ
ಶ್ರೀನಿವಾಸ ನಾಯಕ್ ಇಂದಾಜೆ, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಹಿರಿಯ ಪತ್ರಕರ್ತರಾದ ಭಾಸ್ಕರ ರೈ ಕಟ್ಟ,ಗುರು ರಾಜ್ ಪಣಿಯಾಡಿ, ಜಿಲ್ಲಾ ಸಂಘದ ಕೋಶಾಧಿಕಾರಿ ವಿಜಯ ಕೋಟ್ಯಾನ್,ಕಾರ್ಯ ದರ್ಶಿ ಸುರೇಶ್ ಡಿ ಪಳ್ಳಿ,ಸತೀಶ್ ಇರಾ,ಕಾರ್ಯ ಕಾರಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ ಬಿ.ಎನ್, ಕಿರಣ್ ಸಿರ್ಸಿ ಕರ್,ಗಿರೀಶ್ ಅಡ್ಪಂಗಾಯ,ಹರೀಶ್ ಮೋಟುಕಾನ ಮೊದಲಾದವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!