ಧರ್ಮಸ್ಥಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರೋಪಿಗಳ ದಸ್ತಗಿರಿ

ಮಂಗಳೂರು : ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:47/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ .

ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32),ಸುಹಾಸ್ (22),ಶಶಿಧರ್(30),ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42),ಕಳೆಂಜ ನಿವಾಸಿ ಚೇತನ್ (21),ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಎಂಬವರುಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರಾಪಡಿಸಲಾಗಿದೆ.
ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!