ಕಿಳಿಂಗಾರು: ಕರ್ನಾಟಕ ಬ್ಯಾಂಕ್, ಮಂಗಳೂರು ಇವರ ವತಿಯಿಂದ ಕೊಡುಗೆಯಾಗಿ ನೀಡಲಾದ ಶುದ್ಧ ಕುಡಿಯುವ ನೀರಿನ ಘಟಕದ ಹಸ್ತಾಂತರ ಕಾರ್ಯಕ್ರಮವು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಕಿಳಿಂಗಾರಿನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕಿನ ಅಸಿಸ್ಟೆಂಟ್ ರೀಜನಲ್ ಮ್ಯಾನೇಜರ್ ಶ್ರೀ ಅಶ್ವಿನ್ ಟಿ.ಎಂ. ಹಾಗೂ ನೀರ್ಚಾಲ್ ಶಾಖೆಯ ಪ್ರಬಂಧಕರಾದ ಶ್ರೀ ಸತ್ಯನಾರಾಯಣ ಹೊಳ್ಳ ಅವರು ಉಪಸ್ಥಿತರಿದ್ದು, ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಲೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾ ವ್ಯವಸ್ಥಾಪಕರಾದ ಶ್ರೀ ಕೆ.ಎನ್. ಕೃಷ್ಣ ಭಟ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ವಿಷ್ಣು ಪ್ರಕಾಶ್ ಪೆರ್ವ, ಮಾತೃ ಸಂಘದ ಅಧ್ಯಕ್ಷರಾದ ಶ್ರೀಮತಿ ಪ್ರೀತಾ ಎ., ಶಾಲಾ ಮುಖ್ಯೋಪಾಧ್ಯಾಯಿನಿ, ಅಧ್ಯಾಪಕ-ಅಧ್ಯಾಪಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ನೀಡಿದ ಈ ಕೊಡುಗೆಯು ಶಾಲಾ ವಿದ್ಯಾರ್ಥಿಗಳ ಆರೋಗ್ಯ ಮತ್ತು ಕ್ಷೇಮದ ದೃಷ್ಟಿಯಿಂದ ಮಹತ್ವದ್ದಾಗಿದೆ.

