ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ವಿಶ್ವನಾಥ ಸುವರ್ಣರಿಗೆ ಅಭಿನಂದನಾ ಕಾರ್ಯಕ್ರಮ

ಮಂಗಳೂರು:ಕರ್ನಾಟಕ ರಾಜ್ಯ ಸರಕಾರದಿಂದ ಈ ಬಾರಿಯ ದಕ್ಷಿಣ ಕನ್ನಡ ಮೂಲದ ಕನ್ನಡ ರಾಜ್ಯೋತ್ಸವ ಪುರಸ್ಕೃತ ಪತ್ರಿಕಾ ಛಾಯಾಗ್ರಾಹಕ ವಿಶ್ವ ನಾಥ ಸುವರ್ಣ ರನ್ನು ಗೌರವಿಸಲಾಯಿತು.

ಅವರು ಗುರುವಾರ ಮಂಗಳೂರು ಪತ್ರಿಕಾ ಭವನಕ್ಕೆ ಭೇಟಿ ನೀಡದ ಸಂದರ್ಭ ದಲ್ಲಿದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಪ್ರೆಸ್ ಕ್ಕಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಅವರನ್ನುಅಭಿನಂದಿಸಿಗೌರವಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಿಶ್ವನಾಥ್ ಪತ್ರಿಕಾವಛಾಯಾ ಗ್ರಾಹಕ ನಾಗಿ ಕಳೆದ 45ವರ್ಷಗಳ ಛಾಯಾಚಿತ್ರ ಪತ್ರಿಕೋದ್ಯಮದ ಸಿಹಿ,ಕಹಿ ಅನುಭವ ಹಂಚಿ ಕೊಂಡರು. ಈ ಸಂದರ್ಭದಲ್ಲಿ ತನಗೆ ಬೆಂಬಲ ನೀಡಿದ ವರನ್ನು ಸ್ಮರಿಸಿಕೊಂಡು ಅಭಿನಂದನೆ ಸಲ್ಲಿಸುತ್ತಾ ದ.ಕ ಜಿಲ್ಲಾ ಸಂಘಕ್ಕೆ ಕೃತಜ್ಞತೆ ಸಲ್ಲಿಸಿದರು.

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದಅಧ್ಯಕ್ಷ ಪುಷ್ಪ ರಾಜ್ ಬಿ.ಎನ್ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಕೆಯು ಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ,ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಅವರನ್ನು ಅಭಿನಂದಿಸಿ ಸನ್ಮಾನಿಸಿದರು‌.

ಜಿಲ್ಲಾ ಸಂಘದ ಪೂರ್ವಾ ಧ್ಯಕ್ಷ ಹರ್ಷ ,ಸಂಘದ ಕಾರ್ಯ ದರ್ಶಿ ಸತೀಶ್ ಇರಾ,ಕಾರ್ಯಕಾರಿ ಸಮಿತಿ ಸದಸ್ಯ ಸಂದೇಶ್ ಜಾರ,ಹರೀಶ್ ಮೋಟುಕಾನ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು .ಜಿಲ್ಲಾ ಸಂಘದ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಸ್ವಾಗತಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!