ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ: ಇಬ್ಬರು ಬಾಂಗ್ಲಾದೇಶಿ ಪ್ರಜೆಗಳು ವಶಕ್ಕೆ

ಮಂಗಳೂರು:ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರೆಸ್ಟೋರೆಂಟ್‌ನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಣಂಬೂರು ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದರು.

ಈ ವೇಳೆ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಅವರು ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರನ್ನೂ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲು ಹಾಗೂ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಪತ್ತೆ ಕಾರ್ಯದಲ್ಲಿ ಪಣಂಬೂರು ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ರವರ ನೇತೃತ್ವದಲ್ಲಿ ಪಿಎಸ್ಐ ರವರಾದ ಶ್ರೀಮತಿ ಶ್ರೀಕಲಾ ಕೆ .ಟಿ, ಶ್ರೀ.ಜ್ಞಾನಶೇಖರ ಮತ್ತು ಸಿಬ್ಬಂದಿಗಳಾದ ಇಮ್ತಿಯಾಝ್ ಫಕ್ಕಿರೇಶ್, ರಾಕೇಶ್ ಎಲ್ ಎಮ್, ರವರುಗಳು ಭಾಗವಹಿಸಿರುತ್ತಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!