
ಮಂಗಳೂರು :ಹಣ್ಣುಹಂಪಲು ಸಾಗಾಟದ ಪಿಕಪ್ ವಾಹನ ಹಾಗೂ ಕಾರು ನಡುವೆ ಅಪಘಾತ ನಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಕಡಬದ ಕಳಾರಕ್ಕೆ ಹಣ್ಣು ಹಂಪಲು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಮತ್ತು ವಿರುದ್ಧ ದಿಕ್ಕಿನಿಂದ ಬಂದ ಕಾರು ನಡುವೆ ಢಿಕ್ಕಿ ಸಂಭವಿಸಿದೆ.ಇದರಿಂದ ಪಿಕಪ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಓರ್ವ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.





