ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಿಣಿ ಸಮಿತಿ ಸಭೆ

ಮಂಗಳೂರು: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಕಾರ್ಯಕಾರಿಣಿ ಸಮಿತಿ ಸಭೆ ನಗರದ ಓಷನ್ ಪರ್ಲ್‌ನಲ್ಲಿ ನಡೆಯಿತು.

ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ವರ್ಷದ ಕ್ರೀಡಾಕೂಟಗಳ ಆಯೋಜನೆ ಕುರಿತು ಚರ್ಚಿಸಲಾಯಿತು. ಇದೇ ವೇಳೆ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷ ಅಶೋಕ ಹೆಗ್ಡೆ, ಕಾರ್ಯಕಾರಿಣಿ ಸದಸ್ಯರಾದ ಎ.ಕೆ. ನಿಯಾಜ್, ದೇವದಾಸ್, ವಿಜೇತ, ನೂರ್ ಮೊಹಮ್ಮದ್, ರಿಯಾಜ್ ಹಸನ್, ನೀಲ್ ರೋಡ್ರಿಗಸ್, ರಾಕೇಶ್ ಕೋಟಿಯನ್ ಹಾಗೂ ಸೂರಜ್ ಆಳ್ವ ಉಪಸ್ಥಿತರಿದ್ದರು.

ಕಾರ್ಯದರ್ಶಿ ಸುಪ್ರೀತ್ ಆಳ್ವ ಅವರು ಸಭೆಯ ಕಾರ್ಯಸೂಚಿಯನ್ನು ಮಂಡಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!