ಮಂಗಳೂರು: ಮಾಡೂರು ಮರಿಯಣ್ಣ ಪಾಲು ಕೊಂಡಾಣದ ಶ್ರೀ ಶಿವದುರ್ಗಾಂಭ ಮಠ ಶಿವಗಿರಿಯಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿಯವರ ಜನ್ಮದಿನಾಚರಣೆಯ ಪ್ರಯುಕ್ತ ಫೆ. 2ರಂದು ವಾರ್ಷಿಕ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಅಂದು ಬೆಳಿಗ್ಗೆ 6.30ಕ್ಕೆ ಮಹಾಗಣಪತಿ ಯಾಗ ನಡೆಯಲಿದ್ದು, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ಜರುಗಲಿದೆ. ಬೆಳಿಗ್ಗೆ 9 ಗಂಟೆಗೆ ರುದ್ರಾಭಿಷೇಕ ಹಾಗೂ ಬಳಿಕ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಆರೋಗ್ಯವರ್ಧನೆಗಾಗಿ ಸಂಕಲ್ಪದೊಂದಿಗೆ ಮಹಾ ಧನ್ವಂತರಿ ಯಾಗ ನೆರವೇರಲಿದೆ.

ಮಧ್ಯಾಹ್ನ 12 ಗಂಟೆಗೆ ಶ್ರೀ ಗುರು ಪಾದುಕಾ ಸೇವೆ, 12.30ಕ್ಕೆ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಪ್ರಸಾದ ಹಾಗೂ ಅನ್ನಪ್ರಸಾದ ವಿತರಣೆ ನಡೆಯಲಿದೆ. ಬಳಿಕ ದೀಪಾರಾಧನೆಯೊಂದಿಗೆ ಶ್ರೀ ಶನೀಶ್ವರ ಪೂಜೆ ಹಾಗೂ ಪೂಜ್ಯ ಚಿನ್ಮಯ ದಾಸ ವಿರಚಿತ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರುಗಲಿದೆ.

ರಾತ್ರಿ 8 ಗಂಟೆಗೆ ಮಹಾ ಮಂಗಳಾರತಿ, ಮಹಾಪೂಜೆ ಹಾಗೂ ಪ್ರಸಾದ ಮತ್ತು ಅನ್ನಪ್ರಸಾದ ವಿತರಣೆ ನಡೆಯಲಿದೆ.
ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಶ್ರೀ ಶಿವದುರ್ಗಾಂಭ ಮಠ ಶಿವಗಿರಿಯ ಆಡಳಿತ ಮಂಡಳಿ, ಮುಖ್ಯಸ್ಥರು ಹಾಗೂ ಸಮಿತಿಯ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

