ಬಜ್ಜೆಯಲ್ಲಿ ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ರೌಡಿ ಶೀಟರ್ ಸುಹಾತ್ ಶೆಟ್ಟಿ (38) ಎಂಬಾತನನ್ನು ನಾಲ್ವರ ತಂಡವೊಂದು ಥಳಿಸಿ, ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದೆ. ಸುರತ್ಕಲ್ ನಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯ ಬಗ್ಗೆ ಪೂರ್ವ ದ್ವೇಷ ಹೊಂದಿದ್ದ ತಂಡ ನಗರ ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ತಲ್ವಾರ್ ದಾಳಿನಡೆಸಿ ಹತ್ಯೆ ಮಾಡಿದೆ.
ತಂಡವೊಂದು ಸಾರ್ವಜನಿಕರ ಎದುರಲ್ಲೇ ಆರೋಪಿಯನ್ನು ಅಟ್ಟಾಡಿಸಿಕೊಂಡು ಬಂದಿದ್ದು, ಹಲ್ಲೆ ಮಾಡಿ ಬಳಿಕ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದೆ. ಸಾರ್ವಜನಿಕ ಸ್ಥಳದಲ್ಲೇ ಈತನ ಮೇಲೆ ದಾಳಿ ನಡೆಸಿ ಹತ್ಯೆ ಮಾಡುವ ದೃಶ್ಯವನ್ನು ಇಲ್ಲಿನ ಬಹುಮಹಡಿಯ ಕಟ್ಟಡದಲ್ಲಿದ್ದ ಯುವಕರು ತಮ್ಮ ಮೊಬೈಲ್ ಮೂಲಕ ಚಿತ್ರೀಕರಿಸಿದ್ದಾರೆ. ರಸ್ತೆಯ ಪಕ್ಕದಲ್ಲೇ ಅಷ್ಟೊಂದು ಜನರು ಇದ್ದಾಗಲೂ ಯಾವುದೇ ಭಯ ಅಂಚಿಕೆ ಇಲ್ಲದೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಪೂರ್ವ ದ್ವೇಷವೇ ಈಹತ್ಯೆಗೆ ಪ್ರಮುಖ ಕಾರಣವಾಗಿದ್ದು, ಹತ್ಯೆ ಮಾಡುವ ವಿಡಿಯೋ ಇದೀಗ ವೈರಲ್ ಆಗಿದ್ದು, ಬಜಪೆ ಪೊಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
ಈ ಹತ್ಯೆ ಪ್ರಕರಣವೂ ಕೋಮುಸೂಕ್ಷ್ಮ ವಿಚಾರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಜಪೆ ಆಸುಪಾಸಿನಲ್ಲಿ ಪೊಲೀಸರು ಬಿಗು ಭದ್ರತೆ ಏರ್ಪಡಿಸಿದ್ದಾರೆ.
ಸುಹಾಶ್ ಶೆಟ್ಟಿಶೆಟ್ಟಿಇರಿಸಲಾಗಿರುವ ಆಸ್ಪತ್ರೆಯಬಳಿಭಾರೀಸಂಖ್ಯೆಯಲ್ಲಿ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಆಸ್ಪತ್ರೆಗೆ ಬಿಜೆಪಿ ನಾಯಕ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಭರತ್ ಶೆಟ್ಟಿ ಕೂಡಾ ಆಗಮಿಸಿದ್ದಾರೆ. ಜಿಲ್ಲೆಯ ವಿವಿಧ ಕಡೆಗಳಲ್ಲಿ ನಾಕಾ ಬಂಧಿ ಏರ್ಪಡಿಸಲಾಗಿದೆ.
2022ರ ಜುಲೈ 28ರಂದು ಸುರತ್ಕಲ್ ಪೇಟೆಯಲ್ಲಿ ಫಾಜಿಲ್ ಹತ್ಯೆ ನಡೆದಿತ್ತು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆದಿತ್ತು ಎನ್ನಲಾಗಿತ್ತು ಇದೀಗ ಪ್ರತೀಕಾರ
ರೂಪದಲ್ಲಿ ಕಡನನ್ನು ಕೊಲೆ ಮಾಡಲಾಗಿದೆ. ಸುಹಾಸ್ ಶೆಟ್ಟಿ ಹಿಂದೆ ಬಜರಂಗದಳದಲ್ಲಿದ್ದು ಗೋರಕ್ಷಣೆ ವಿಷಯದಲ್ಲಿ ಸಕ್ರಿಯನಾಗಿದ್ದ ಅಲ್ಲದೆ ಕೊಲೆ, ಕೊಲೆ ಯತ್ನ ಪ್ರಕರಣದಲ್ಲೂ ಆರೋಪಿಯಾಗಿದ್ದ.
ಕೊಲೆಯನ್ನು ಪ್ರತಿಭಟಿಸಿ ಹಿಂದೂ ಪರ ಸಂಘಟನೆಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ಬಸ್ಸು ಸಂಚಾರ ಮೊಟಕುಗೊಂಡು ಜನ ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ಬಸ್ಸುಗಳಿಗೆ ಕಲ್ಲು ಎಸೆದು ಹಾನಿಗೊಳಿಸಲಾಗಿದೆ. ಮೇ 6 ರ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜ್ಯಾರಿಗೆ ಬಂದಿದೆ.
ಕೊಲೆಗೆ ಪ್ರತೀಕಾರವಾಗಿ ಅಲ್ಲಿಲ್ಲಿ ಅಹಿತಕರ ಘಟನೆಗಳು ಕೂಡಾ ನಡೆದ ಬಗ್ಗೆ ವರದಿಯಾಗಿದೆ. ಮಂಗಳೂರು ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಶುಕ್ರವಾರ ಮುಂಜಾನೆ ನೌಷಾದ್ ಎಂಬಾತನಿಗೆ ಚೂರಿಯಿಂದ ಇರಿದ ಘಟನೆ ವರದಿಯಾಗಿದೆ.
ತೊಕ್ಕೊಟ್ಟು ಸಮೀಪದ ಕಲ್ಲಾಪು ಮಾರ್ಕೆಟ್‌ಗೆ ತೆರಳಲು ಮುಂಜಾನೆ 3 ಗಂಟೆಗೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ನಿಂತಿದ್ದ ವೇಳೆ ಎರಡು ದ್ವಿಚಕ್ರ ವಾಹನದಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ನೌಷಾದ್‌ರ ಬೆನ್ನಿಗೆ ಚೂರಿಯಿಂದ ಇರಿದರು ಎನ್ನಲಾಗಿದೆ. ತಕ್ಷಣ ನೌಷಾದ್ ಓಡಿ ತಪ್ಪಿಸಿಕೊಂಡಿದ್ದು, ಬಳಿಕ ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅದೇ ರೀತಿ ಉಳ್ಳಾಲ ತೊಕ್ಕೋಟು ಒಳಪೇಟೆಯಲ್ಲಿ ಶುಕ್ರವಾರ ಮುಂಜಾನೆ ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಆತ ಗಾಯಗೊಂಡಿದ್ದಾನೆ.
ಗಾಯಗೊಂಡವರನ್ನು ಅಳೇಕಲ ನಿವಾಸಿ ಫೈಝಲ್ ಎಂದು ಗುರುತಿಸಲಾಗಿದೆ.
ಫೈಝಲ್ ಅವರು ಕಲ್ಲಾಪು ಮಾರುಕಟ್ಟೆ ಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ