ಐದನೇ ದಿನದ ಧರಣಿ ಸತ್ಯಾಗ್ರಹಕ್ಕೆ ಸಂಸದ ಶ್ರೀ ಶ್ರೀನಿವಾಸ ಪೂಜಾರಿ ಅವರ ಬೆಂಬಲ

ಚಾಲಕರ ಧರಣಿ ಸತ್ಯಾಗ್ರಹ ನಡೆಯುತ್ತಿರುವ ಸ್ಥಳಕ್ಕೆ ಉಡುಪಿ ಜಿಲ್ಲೆಯ ಮಾನ್ಯ ಸಂಸದರಾದ ಶ್ರೀ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ, ಪ್ರತಿಭಟನಾ ನಿರತ ಚಾಲಕರೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲಕರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಈಗಾಗಲೇ ಪತ್ರದ ಮೂಲಕ ಕೇಂದ್ರ ನಾಗರಿಕ ವಿಮಾನಯಾನ ಸಚಿವರ ಗಮನಕ್ಕೆ ತಂದಿರುವುದಾಗಿ ತಿಳಿಸಿದರು.

ಈ ಸಮಸ್ಯೆಯನ್ನು ಬಗೆಹರಿಸುವ ಜವಾಬ್ದಾರಿ ಉಭಯ ಜಿಲ್ಲೆಗಳ ಸಂಸದರ ಮೇಲಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ, ಸಮಸ್ಯೆಗೆ ಅತಿ ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಭರವಸೆ ನೀಡಿದರು.

ಅಲ್ಲದೆ, ಇಂದು ಮತ್ತೊಮ್ಮೆ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ, ತುರ್ತಾಗಿ ಸಭೆ ಕರೆದು ಸಮಸ್ಯೆಯನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಸೂಚಿಸುವುದಾಗಿ ತಿಳಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!