ಬಂಟ್ವಾಳ: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಬಂಟ್ವಾಳದಲ್ಲಿರುವ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಚೆನ್ನಮ್ಮ ಕುಟೀರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜನಾರ್ದನ ಪೂಜಾರಿ ಅವರು ಸಲೀಂ ಅಹ್ಮದ್ ಅವರನ್ನು ಶಾಲು ಹೊದಿಸಿ ಗೌರವಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ಸ್ಥಾನಮಾನ) ಟಿ.ಎಂ. ಶಾಹಿದ್ ತೆಕ್ಕಿಲ್ ಸಹಿತ ಮತ್ತಿತರರು ಉಪಸ್ಥಿತರಿದ್ದರು.

