ಮ೦ಗಳೂರು: ಕೈ ಅಥವಾ ಕಾಲು ಕಳೆದುಕೊಂಡು ಸಂಕಷ್ಟದ ಜೀವನ ನಡೆಸುತ್ತಿರುವವರಿಗೆ ನೆರವಾಗುವ ಉದ್ದೇಶದಿಂದ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ (ರಿ.) ಕಿನ್ನಿಗೋಳಿ ವತಿಯಿಂದ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ನಿಡ್ಡೋಡಿ ಹೇಳಿದರು

ಪ್ರೆಸ್ ಕ್ಲಬ್ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.14 ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಈ ಶಿಬಿರ ನಡೆಯಲಿದೆ. ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ (ರಿ.), ಆಲ್ ಇಂಡಿಯಾ ಜೈನ್ ಯೂತ್ ಫೆಡರೇಶನ್ (ರಿ.) ಹಾಗೂ ಹುಬ್ಬಳ್ಳಿಯ ಮಹಾವೀರ ಲಿಂಬ್ ಸೆಂಟರ್ನ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

