ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆ ಚುರುಕುಗೊಳ್ಳಲು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಕಾರಣವೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಋತುವಿನ ಆರಂಭದಿಂದಲೂ ಸಮುದ್ರ ಮಟ್ಟದಲ್ಲಿ ನಿರಂತರ ಬದಲಾವಣೆಗಳು ಮುಂದುವರಿದಿವೆ.
ಕರಾವಳಿ ಕರ್ನಾಟಕವು ತೀವ್ರ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಪ್ರದೇಶದಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಇನ್ನು ಆಗಸ್ಟ್ 16ರಂದು ಕರಾವಳಿ ಜಿಲ್ಲೆಗಳು ಬೆಳಗಾವಿ, ಬೀದರ್ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.
ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್. ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು. ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಶನಿವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ