ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಾಜ್ಯ ಸರಕಾರಿ ನೌಕರರ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ದಕ್ಷಿಣ ಕನ್ನಡ ಜಿಲ್ಲೆಯ 133 ಎಸೆಸೆಲ್ಸಿ, 102 ಪಿಯುಸಿ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲೆಯ 115 ಮಂದಿ ಎಸೆಸೆಲ್ಸಿ ಮತ್ತು 88 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಅವರು ಸರಕಾರಿ ನೌಕರರು ಸರ್ಕಾರದ ಯೋಜನೆಗಳನ್ನು,ಮಹತ್ವಾಕಾಂಕ್ಷಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮಹತ್ಕಾರ್ಯವನ್ನು ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸಾಧ್ಯತೆಗಳ ಸಾಗರವಾಗಿ ಬೆಳೆಯುತ್ತಿದೆ. ಭವಿಷ್ಯವನ್ನು ನಿರ್ಮಾಣ ಮಾಡುವ ವಿದ್ಯಾರ್ಥಿಗಳಿಗೆ ವಿಶ್ವಾಸ ತುಂಬಿಸುವ ಕೆಲಸವನ್ನು ಸಂಘದಿಂದ ಮಾಡಲಾಗುತ್ತಿದೆ. ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಕಲ್ಪನೆಯನ್ನು ನನಸಾಗಿಸಲು ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ಹೇಳಿದರು.

ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು, ಸರಕಾರಿ ನೌಕರರು ಸಮಾಜಕ್ಕೆ ಕೊಡುಗೆ ನೀಡುವ ದೇಶಾಭಿಮಾನಿಗಳಾಗಿ ಹೊರಹೊಮ್ಮಬೇಕು. ಸರಕಾರಿ ನೌಕರರ ಬೇಡಿಕೆಗಳ ಈಡೇರಿಸಲು ಶಾಸಕನ ನೆಲೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಜ್ಯ ಸರ್ಕಾರಿ ನೌಕರರ ಸಿಗುವ ಎಲ್ಲಾ ಸವಲತ್ತು ಗಳನ್ನು ಹೋರಾಟ ನಡೆಸಿ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪುರಸ್ಕರಿಸಲಾಯಿತು.


ಇದೆ ಸಂಧರ್ಭದಲ್ಲಿ ಸಂಘಧ ಪದಾಧಿಕಾರಿಗಳು ಹಾಗೂ ನಿರ್ದೇಶಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಉಭಯ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!