ಮಂಗಳೂರು: ಪ್ರಸ್ತುತ ವಿವಾದದ ಸುಳಿಯಲ್ಲಿ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತೆ ಸುಜಾತಾ ಭಟ್ ಗೆ ತಾತ್ಕಾಲಿಕವಾಗಿ ಕಾನೂನು ಕ್ರಮದಿಂದ ಬಿಗ್ ರಿಲೀಫ್ ಸಿಕ್ಕಿದೆ . ಅವರ ವಿರುದ್ಧದ ಕಠಿಣ ಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಆದರೆ, ವಿಚಾರಣೆಗೆ ಹಾಜರಾಗುವುದು ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಸುಜಾತಾ ಭಟ್ ವಿರುದ್ಧ ದಾಖಲಾಗಿದ್ದ ಕೆಲವೊಂದು ದೂರಿನ ಪರಿಶೀಲನೆ ನಡೆದಿದೆ. ಪ್ರಥಮ ದೃಷ್ಟಿಯಿಂದ ಗಂಭೀರ ಕಾನೂನು ಉಲ್ಲಂಘನೆಯ ಲಕ್ಷಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ, ತಕ್ಷಣದ ಬಂಧನ ಅಥವಾ ಬಂಧನಾತ್ಮಕ ಕ್ರಮ ಕೈಗೊಳ್ಳುವುದನ್ನು ತಪ್ಪಿಸಲಾಗಿದೆ. ಆದರೆ ತನಿಖೆ ಮುಂದುವರಿದಿದ್ದು, ಅವರು ವಿಚಾರಣೆಗೆ ಸಹಕರಿಸಬೇಕೆಂದು ನಿಗದಿತ ದಿನಾಂಕಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗುವುದೆಂದು ಅಧಿಕೃತ ಮೂಲಗಳು ತಿಳಿಸಿದೆ .
ಕಳೆದ ನಾಲ್ಕು ದಿನಗಳಿಂದ ಎಸ್ಐಟಿ ವಿಚಾರಣೆಗೆ ಒಳಪಟ್ಟಿದ ಸುಜಾತ ಭಟ್ ಅವರಿಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಸುಜಾತ ಭಟ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಅಧಿಕಾರಿಗಳು ವಿಚಾರಣೆಗೆ ಕರೆದಾಗ ಬರುವಂತೆ ಸೂಚನೆ ನೀಡಿ ಕಳುಹಿಸಿದ್ದಾರೆ ಹಾಗಾಗಿ ಸುಜಾತ ಭಟ್ ಈ ಒಂದು ಪ್ರಕರಣದಿಂದ ನಿಟ್ಟುಸಿರು ಬಿಟ್ಟಿದ್ದಾರೆ.
ಮೊದಲಿಗೆ ಅನನ್ಯ ಭಟ್ ನನ್ನ ಮಗಳು ಎಂದು ಹೇಳಿ ದೂರು ನೀಡಿದ್ದರು. ಇದೇ ಪ್ರಕರಣದ ಕುರಿತು ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ಒಳಪಡಿಸಿದಾಗ ಸುಜಾತ ಭಟ್ ನನಗೇನು ತಪ್ಪಿಲ್ಲ ಕೆಲವರು ಹೇಳಿದಂತೆ ನಾನು ಕೇಳಿದ್ದೇನೆ ನನ್ನನ್ನು ಬಿಟ್ಟುಬಿಡಿ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದರು. ಇದೀಗ ಈ ಒಂದು ಪ್ರಕರಣದಿಂದ ಸುಜಾತಾ ಭಟ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.