ಮಂಗಳೂರು: ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .
ಸೆ.1 ಮತ್ತು ಸೆ.4ರಿಂದ ಸೆ.6ರವರೆಗೆ ಕರಾವಳಿಯ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಸೆ.2 ಮತ್ತು ಸೆ.3ಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡು, ಉತ್ತರ ಒಳ ನಾಡಿನಲ್ಲಿ ಸಾಧಾರಣದಿಂದ ಹಗುರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಈ ಮೂಲಕ ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಹೆಚ್ಚಾಗಲಿದ್ದು ಸಾಗರ ಕಿನಾರೆಯ ಪ್ರದೇಶದವರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ .