ಪುತ್ತೂರು: ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಲಂಚ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿಯಾಗಿರುವ ತಹಶೀಲ್ದಾರ್ ಎಸ್.ಬಿ. ಕೂಡಲಗಿ ಸೋಮವಾರ ವಿಚಾರಣೆಗೆ ಹಾಜರಾಗಿಲ್ಲ.
ಆ. 28ರಂದು ತಾಲೂಕು ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದರು. ಈ ವೇಳೆ ತಹಶೀಲ್ದಾರ್ ನಾಪತ್ತೆ ಆಗಿದ್ದರು. ಸೆ. 1ರಂದು ಮಂಗಳೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುವಂತೆ ತಹಶೀಲ್ದಾರ್ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಹೊರಡಿಸಿದ್ದರು.
ಅದಾಗ್ಯೂ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಲೋಕಾಯುಕ್ತ ಪೊಲೀಸರು ಇನ್ನೊಮ್ಮೆ ನೋಟಿಸ್ ಹೊರಡಿಸುವ ಸಾಧ್ಯತೆ ಇದೆ. ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ಎದುರಿಸುವುದು ಕಡ್ಡಾಯ ಆಗಿರುವುದರಿಂದ ತಹಶೀಲ್ದಾರ್ ನಡೆ ಏನೆಂಬ ಕುತೂಹಲ ಸಾರ್ವಜನಿಕರಲ್ಲಿ ಮೂಡಿದೆ.