ಗೋಹತ್ಯೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ. ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಹಿಂದುತ್ವ ಸಂಘಟನೆಯ ಮುಖಂಡನ ವಿರುದ್ಧ ಪ್ರಕರಣ ದಾಖಲು.

ಗೋಹತ್ಯೆಯನ್ನು ಖಂಡಿಸಿ ಗೋ ಮಾತಾ ಸಂರಕ್ಷಣಾ ಚಳವಳಿ ಪೆರ್ನೆ ಇದರ ವತಿಯಿಂದ ಗೋ ಹತ್ಯೆಯನ್ನು ಖಂಡಿಸಿ ಸೆ.6ರಂದು ದಕ್ಷಿಣ ಕನ್ನಡ ಜಿಲ್ಲೆಯ ಪೆರ್ನೆ ಗ್ರಾಮದ ಕಡಂಬುವಿನ ಕಾರ್ಲ ರಾಮದ್ವಾರದ ಬಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಹಿಂದುತ್ವ ಸಂಘಟನೆಯ ಮುಖಂಡ ಗಣರಾಜ್ ಭಟ್ ಕೆದಿಲ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಪ್ರತಿಭಟನೆಯಲ್ಲಿ ಮಾತನಾಡಿದ ಗಣರಾಜ್ ಭಟ್ ಕೆದಿಲ ಸ್ಥಳೀಯವಾಗಿ ಧಾರ್ಮಿಕ, ಸಮುದಾಯಿಕವಾಗಿ ದ್ವೇಷ ಭಾವನೆ ಹುಟ್ಟಿಸುವ ಉದ್ದೇಶದಿಂದ ಗುಂಪು ಗುಂಪುಗಳ, ಸಮುದಾಯಗಳ ಮಧ್ಯೆ ವೈಮನಸ್ಸು ಬೆಳೆಸುವಂತೆ ಪ್ರಚೋದನಾಕಾರಿಯಾಗಿ ಮಾತನಾಡಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 78/2025 ಕಲಂ: 353 (2)ಬಿಎನ್‍ಎಸ್ 2023 ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!