ಮಂಗಳೂರು: ರಾಜ್ಯದ ಕೆಲ ಇಂದು ವರುಣ ಅಬ್ಬರಿಸಲಿದ್ದಾನೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಮೈಸೂರು, ಮಂಡ್ಯ, ಬೆಂಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ.
ಸೆಪ್ಟೆಂಬರ್ 10ರಿಂದ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ