ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಲು ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಉದ್ದೇಶದಿಂದ ಕಳೆದ 43ವರ್ಷಗಳಿಂದ ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ”ಯನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸೆಪ್ಟೆಂಬರ್ 14 ರವಿವಾರ ಆಚರಿಸಲಾಗುವುದೆಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು
ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೃಷ್ಣಾಷ್ಟಮಿಯಂದು ಬೆಳಗ್ಗೆ 9.00ರಿಂದ ಶ್ರೀ ಕೃಷ್ಣ ವರ್ಣ ವೈಭವ, ಮಧ್ಯಾಹ್ನ 12 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, 1 ಗಂಟೆಗೆ ಸರಿಯಾಗಿ ಶ್ರೀ ಕೃಷ್ಣ ಜನ್ಮ ಮಹೋತ್ಸವ ನಂದಗೋಕುಲ ವೇದಿಕೆಯಲ್ಲಿ ಗಣ್ಯರು ಮತ್ತು ಪುಟಾಣಿ ಕೃಷ್ಣರು ಮತ್ತು ಮಾತೆಯರ ಸಮ್ಮುಖದಲ್ಲಿ ದೀಪ ಪ್ರಜ್ವಲನೆದೊಂದಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ಉದ್ಘಾಟನೆಗೊಳ್ಳಲಿದೆ.
ರಾತ್ರಿ 12.00ರ ತನಕ ವಿವಿಧ ಸ್ಪರ್ಧೆಗಳನ್ನು ಒಟ್ಟು 43 ವಿಭಾಗಗಳಲ್ಲಿ, 9 ವೇದಿಕೆಗಳಲ್ಲಿ ಏಕ ಕಾಲದಲ್ಲಿ ಆಯೋಜಿಸಲಾಗಿದೆ ಮತ್ತು ಮಧ್ಯಾಹ್ನ 12 ರಿಂದ ರಾತ್ರಿ 12ರವರೆಗೆ ವಿವಿಧ ಸಾಹಿತ್ಯಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ರಾಷ್ಟ್ರೀಯ ಮಕ್ಕಳ ಉತ್ಸವದಲ್ಲಿ ಜೋಡಿಸಲಾಗಿದೆ.ರಾತ್ರಿ 12 ಗಂಟೆಗೆ ಅರ್ಘ್ಯ ಪ್ರಧಾನ – ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದರು . .
ಶ್ರೀ ಕೃಷ್ಣವೇಷ ಸ್ಪರ್ಧೆಗಳು ಒಟ್ಟು 43 ವಿಭಾಗಗಳಲ್ಲಿ ಕದ್ರಿ ದೇವಳದ ಆವರಣದಲ್ಲಿ ನಡೆಯಲಿದೆ , ಶ್ರೀ ಮಹಾಗಣಪತಿ ದೇವಸ್ಥಾನ ಅಭಿಷೇಕ ಮಂದಿರ ಕದ್ರಿಕೆರೆ ಅಶ್ವತಕಟ್ಟೆ ಬಳಿ , ಶ್ರೀ ಕೃಷ್ಣ ಜನ್ಮ ಮಹೋತ್ಸವ ಸಮಿತಿ ವೇದಿಕೆ , ಅಭಿಷೇಕ ಮಂದಿರ 1ನೇ ಮಹಡಿ ಕಲ್ಯಾಣ ಮಂಟಪ , ಮಂಜುಶ್ರೀ , ಅಭಿಷೇಕ ಮಂದಿರ , ಪ್ರಧಾನ ವೇದಿಕೆ ಸಹಿತ ಏಕಕಾಲದಲ್ಲಿ ನಡೆಯಲಿದ್ದು , ಸ್ಪರ್ಧೆಗೆ ಭಾಗವಯಿಸುವ ಮಕ್ಕಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕವನ್ನು ಸ್ವೀಕರಿಸುವುದಿಲ್ಲ ಎಂದರು .
ಸುದ್ದಿಗೋಷ್ಠಿಯಲ್ಲಿ ನವನೀತ್ ಶೆಟ್ಟಿ ಕದ್ರಿ , ಜಾನ್ ಚಂದ್ರನ್ , ಜನಾರ್ಧನ , ವಿಜಯ ಲಕ್ಷ್ಮಿ , ಶ್ರೇಯಾ , ಮುಂತಾದವರು ಉಪಸ್ಥಿತರಿದ್ದರು .