ಮಂಗಳೂರು: ಆಡಳಿತ ಸುಧಾರಣೆ ಮತ್ತು ಜನ ಪರ ನಿಲುವಿಗೆ ಬೇಗನೆ ಸ್ಪಂದಿಸುವ ದೃಷ್ಟಿಯಿಂದ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಶಾಸಕರ ಕಚೇರಿಯ ಉದ್ಘಾಟನೆ ಕಾರ್ಯಕ್ರಮವು ಇಂದು ನಡೆಯಿತು .
ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರಾದ ಪ್ರಕಾಶ್ ಪಿ ಎಸ್ ನೆರವೇರಿಸಿಕೊಟ್ಟರು . ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮಂಗಳೂರು ಇದರ ಅಧ್ಯಕ್ಷರಾದ ಪುರುಷೋತ್ತಮ, ಪುತ್ತೂರು ನಗರ ಮಂಡಲ ಅಧ್ಯಕ್ಷರಾದ ಅಶೋಕ್ ಕುಮಾರ್ , ಪಕ್ಷದ ನೇತಾರರು , ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು ಉಪಸ್ಥಿತತರಿದ್ದರು .