ಮಂಗಳೂರು :ಮುಂಬೈನಿಂದ ಮಂಗಳೂರಿಗೆ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಂಗಳೂರಿನ ಚಿರಾಗ್ ಸನಿಲ್, ಆಲ್ವಿನ್ ಕ್ಲಿಂಟನ್ ಡಿ ಸೋಜಾ,ಜನನ್ @ ಜನನ್ ಜಗನ್ನಾಥ, ರಾಜೇಶ್ ಬಂಗೇರ @ ಅಚ್ಚು @ ರಕ್ಷಿತ್, ವರುಣ್ ಗಾಣಿಗ ಮತ್ತು ಕೇರಳದ ಅಬ್ದುಲ್ ಕರೀಂ ಇ.ಕೆ ಎಂದು ಗುರುತಿಸಲಾಗಿದೆ. ಬಂಧಿತರಿಂದ ರೂ. 22,30,000/- ಮೌಲ್ಯದ 111.83 ಗ್ರಾಂ ಎಂಡಿಎಂಎ ಮತ್ತು ರೂ. 1,90.000/- ಮೌಲ್ಯದ 21.03 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ