ಧರ್ಮಸ್ಥಳ ಬುರುಡೆ ಪ್ರಕರಣ .ಜಡ್ಜ್‌ ಮುಂದೆ ಚಿನ್ನಯ್ಯನ ಹೇಳಿಕೆ.

ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಮಂಗಳವಾರ ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದರು.ಈ ಪ್ರಕರಣದ ಬಗ್ಗೆ ಚಿನ್ನಯ್ಯ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು.


ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಎಚ್.ಟಿ ಮುಂದೆ ಹಾಜರು ಪಡಿಸಿ ಹೇಳಿಕೆ ದಾಖಲಿಸುವ ಕಾರ್ಯ ಆರಂಭಿಸಲಾಗಿತ್ತು. ಸಂಜೆ ನ್ಯಾಯಾಲಯದ ಪ್ರಕ್ರಿಯೆಗಳನ್ನು ಮುಗಿಸಿ ಆತನನ್ನು ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.


ಜಡ್ಜ್‌ ಮುಂದೆ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದಾನೆ. ಆದರೆ ಇದು ಪೂರ್ಣವಾಗಿಲ್ಲ ಎನ್ನಲಾಗಿದೆ. ಹೀಗಾಗಿ ಮತ್ತೆ ಸೆ.25 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲು ಸೂಚನೆ ನೀಡಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!