ಮಂಗಳೂರು: ಎಸಿಪಿ ತಂಡ ಮತ್ತು ಬರ್ಕೆ ಪೊಲೀಸರ ಜಂಟಿ ಕಾರ್ಯಾಚರಣೆ ಯಲ್ಲಿ ಅಫೀಮು ಮಾದಕ ದ್ರವ್ಯ ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ರಾಜಸ್ಥಾನ ಮೂಲದ ವಾಸುದೇವ(48) ಮತ್ತು ಈತನಿಗೆ ಮಾದಕ ವಸ್ತುವನ್ನು ಪೂರೈಸಿದ್ದ ರಾಜಸ್ಥಾನ್ ಮೂಲದ ಮಂಗಲ್ ಚೌಧರಿ(44) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸುಮಾರು ನಲ್ವತ್ತು ಸಾವಿರ ರೂಪಾಯಿ ಬೆಲೆಬಾಳುವ 151 ಗ್ರಾಂ ಓಪಿಯಂ ಮಾದಕ ವಸ್ತು, 2 ಮೊಬೈಲ್, ಒಂದು ದ್ವಿಚಕ್ರ ವಾಹನ ವಶಪಡಿಸಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಮಂಗಳೂರು ಕೇಂದ್ರ ಉಪ ವಿಭಾಗದ ಅಪರಾಧ ವಿಭಾಗ ಮತ್ತು ಬರ್ಕೆ ಠಾಣೆಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.