ಭಾರತ-ಪಾಕಿಸ್ತಾನ ಉದ್ವಿಗ್ನ ಸ್ಥಿತಿ ಹಿನ್ನೆಲೆ ದೇಶದೆಲ್ಲೆಡೆ ಹೈ ಅಲರ್ಟ್ ಘೋಷಣೆ ಆಗಿದೆ. ಜನರು ಕೂಡ ಆತಂಕಗೊಂಡಿದ್ದಾರೆ. ಈ ಸಮಯದಲ್ಲಿ ಮಂಗಳೂರಿನ ವಿದ್ಯಾರ್ಥಿಯೊಬ್ಬರು ವಿವಾದಾತ್ಮಕ ಪೋಸ್ಟ್ ಮಾಡುವ ಮೂಲಕ ನಾಡಿನ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಎರಡು ದೇಶಗಳಲ್ಲೂ ಯುದ್ಧದ ಸ್ಥಿತಿ ನಿರ್ಮಾಣವಾಗಿದ್ದು, ಇಂತಹ ಟೈಮ್ನಲ್ಲಿ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ಗಳನ್ನು ಶೇರ್ ಮಾಡುವ ಮೂಲಕ ಕಿಡಿ ಹೊತ್ತಿಸುವ ಕೆಲಸ ಮಾಡ್ತಿದ್ದಾರೆ.
ಮಂಗಳೂರು ವಿದ್ಯಾರ್ಥಿನಿಯಿಂದ dikkaraoperationsindura ಎಂಬ ಹ್ಯಾಶ್ಟ್ಯಾಗ್ ಬಳಸಿ ಎಂಬ ಇನ್ಸ್ಟಾಗ್ರಾಮ್ ಪೇಜ್ನಲ್ಲಿ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿದ್ದಾರೆ. ದೇಶ ವಿರೋಧಿ ಬರಹದ ಮೂಲಕ ಮಂಗಳೂರು ವಿದ್ಯಾರ್ಥಿನಿಯ ಭಾರೀ ವಿವಾದ ಸೃಷ್ಟಿಸಿದ್ದು, ಯುವತಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.