ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶನಿವಾರ ಕರೆತಂದಿದ್ದು ಇಂದು ಆತ ನ್ಯಾಯಾಲಯದ ಮುಂದೆತನ್ನ ಹೇಳಿಕೆಯನ್ನು ದಾಖಲಿಸಲಿದ್ದಾನೆ .
ಬೆಳ್ತಂಗಡಿ ನ್ಯಾಯಾಲಯಕ್ಕೆ ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದು. 11.30 ಕ್ಕೆ ಆತನನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ .ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ. ಈತ ಈ ಹಿಂದೆ ಎರಡು ದಿನಗಳ ಕಾಲ ಹೇಳಿಕೆ ನೀಡಿದ್ದು ಈತನ ಹೇಳಿಕೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಇಂದು ಮುಂದುವರಿದ ಹೇಳಿಕೆ ದಾಂಖಲಿಸುವ ಕಾರ್ಯ ನಡೆಯಲಿದೆ .ಇಂದು ಈತನ ಹೇಳಿಕೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ