ವಾರಗಳ ಹಿಂದೆ ಪರಾರಿಯಾಗಿದ್ದ ಇಬ್ಬರು ಗಾಂಜಾ ಮಾರಾಟಗಾರರ ಬಂಧನ.

ಬಂಟ್ವಾಳ: ಅಬಕಾರಿ ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾರಗಳ ಹಿಂದೆ ಪರಾರಿಯಾಗಿದ್ದ ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಟ್ವಾಳ ಪೋಲೀಸರು ಬಂಧಿಸಿ, ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಅಬ್ದುಲ್ ಮಜೀದ್ ಹಾಗೂ ಸಹಸವಾರ ಅಬ್ದುಲ್ ಸಾಧಿಕ್ ಎಂಬವರನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದು, ಬಂಧಿತರಿಂದ ಗಾಂಜಾ ಸಹಿತ ಒಟ್ಟು 2,17,460 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ಧಾರೆ.


ಸೆ. 25 ರಂದು ಈ ಇಬ್ಬರು ಆರೋಪಿಗಳು ಪಿಕಪ್ ವಾಹನದಲ್ಲಿ ನಿಷೇಧಿತ ಗಾಂಜಾವನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಆಧರಿಸಿ ಮಂಗಳೂರು ಅಬಕಾರಿ ಇಲಾಖೆಯ ಅಧಿಕಾರಿಗಳು ಇಲಾಖೆಯ ವಾಹನದಲ್ಲಿ ಬೆನ್ನಟ್ಟಿಕೊಂಡು ಬಂದು ನಂದಾವರದ ಬಳಿ ನಿಲ್ಲಿಸಲು ಸೂಚಿಸಿದಾಗ ಇಲಾಖೆಯ ಅಧಿಕಾರಿಗಳ ಮೇಲೆ ವಾಹನವನ್ನು ಹತ್ತಿಸಲು ನೋಡಿ ಬಳಿಕ ವಾಹನ ನಿಲ್ಲಿಸಿ ಪರಾರಿಯಾಗಿದ್ದರು.ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು.


ಗೂಡಿನಬಳಿ ಎಂಬಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ರೌಂಡ್ಸ್ ನಲ್ಲಿರುವ ವೇಳೆ ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುವ ಇಬ್ಬರು ಯುವಕರನ್ನು ನಿಲ್ಲಿಸಲು ಸೂಚಿಸಿದಾಗ ನಿಲ್ಲಿಸದೆ ಓಡಿ ಹೋದಾಗ ಸಂಶಯಗೊಂಡು ಇವರನ್ನು ತಡೆದು ವಿಚಾರಿಸಿದಾಗ ಅಬಕಾರಿ ಇಲಾಖೆಯ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಗಾಂಜಾ ಮಾರಾಟಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ನೀಡಿದ್ದಾರೆ ಎಂದು ಪೋಲೀಸ್ ಇಲಾಖೆ ತಿಳಿಸಿದ್ದು, ಈ ಸಂದರ್ಭದಲ್ಲಿ ಆರೋಪಿಗಳ ಬಳಿ 88 ಸಾವಿರ ರೂ ಮೌಲ್ಯದ 8.790 ಕಿ.ಗ್ರಾಂ.ತೂಕದ 5 ಕಟ್ಟು ಗಾಂಜಾ ಪತ್ತೆಯಾಗಿದೆ.
ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಇವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!