ಅಕ್ಟೋಬರ್ 19 ರಂದು ಶ್ರೀ ಬಾರ್ಕೂರು ಮಹಾ ಸಂಸ್ಥಾನ ಭಾರ್ಗವ ಬೀಡು ಬಂಟ ಸಂಸ್ಕೃತಿ ಪರಂಪರೆ ಅನಾವರಣ – ದಕ್ಷಿಣ ಕನ್ನಡ ಜಿಲ್ಲಾ ಮಹಾಮಂಡಲದ ಪದಗ್ರಹಣ ಸಮಾರಂಭ.

ಮಂಗಳೂರು:ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡು ಶ್ರೀ ಸಂಸ್ಥಾನದ ದಶಮ ಸಂಭ್ರಮದ ಸಂಕಲ್ಪ “ಬಂಟ ಸಂಸ್ಕೃತಿ ಪರಂಪರೆ ಅನಾವರಣ” ದಕ್ಷಿಣ ಕನ್ನಡ ಜಿಲ್ಲಾ ಮಹಾ ಮಂಡಲದ ಪದಗ್ರಹಣ ಸಮಾರಂಭವು ಅಕ್ಟೋಬರ್ 19 ಭಾನುವಾರ ಸಂಜೆ 3 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿರುವ ವಿ.ಕೆ. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಮಹಾಮಂಡಲದ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ತಿಳಿಸಿದರು .

ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಶ್ರೀ ಬಾರ್ಕೂರು ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಡಾ ವಿದ್ಯಾವಾಚಾಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಬೆಂಗಳೂರು ಎಂಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕರಾದ ಡಾ ಕೆ ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ನ ಸಿಎಂಡಿ ಡಾ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಅಧ್ಯಕ್ಷತೆ ವಹಿಸಲಿದ್ದಾರೆ. ಶಶಿ ಕ್ಯಾಟರಿಂಗ್ ನರ್ವಿಸಸ್ ಪ್ರೈ. ಲಿಮಿಟೆಡ್ ನ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ ಬರೋಡ ದಶಮ ಸಂಭ್ರಮ ಸಂಕಲ್ಪ ಅನಾವರಣ ಮಾಡಲಿದ್ದಾರೆ. ಶ್ರೀ ಬಾರ್ಕೂರು ಮಹಾಸಂಸ್ಥಾನ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಡಾ ಎಂ ಮೋಹನ್ ಆಳ್ವರವರು ದಶಮ ಸಂಭ್ರಮ ಸಂಕಲ್ಪ ಅಶಯ ನುಡಿಗಳನ್ನಾಡಲಿದ್ದಾರೆ ಎಂದು ತಿಳಿಸಿದರು .

ಸಭಾ ಕಾರ್ಯಕ್ರಮದ ಬಳಿಕ ಶ್ರೀ ಸಂತೋಷ್ ಶ್ರೀಪಾದರು ನೀಡುವ ವ್ಯಾಖ್ಯಾನದಲ್ಲಿ ಪಟ್ಲ ಸತೀಶ್ ಶೆಟ್ಟಿ ಅವರಿಂದ ಗಾನ ಸುಧೆ ಯಕ್ಷ ವ್ಯಾಖ್ಯಾನ ವೈಭವ ಕರ್ಣ ಪರ್ವ ನಡೆಯಲಿದೆ ಎಂದರು .ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಡಾ ಮೋಹನ್ ಆಳ್ವರವರ ನೇತೃತ್ವದಲ್ಲಿ ಹಲವಾರು ಸಮಿತಿಗಳನ್ನು ರಚಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತೀ ತಾಲೂಕಿನಿಂದ ಮಂಡಲವನ್ನು ರಚಿಸಲಾಗಿದೆ. ಮಹಾ ಸಂಸ್ಥಾನದ ದಶಮ ಸಂಭ್ರಮದ ಪ್ರಯುಕ್ತ ಜಿಲ್ಲಾ ಮಹಾಮಂಡಲ, ತಾಲೂಕು ಮಂಡಲ ಸಹಿತ 8 ಮಂಡಲಗಳ ಪದಗ್ರಹಣ ನಡೆಯಲಿದ್ದು ಜವಾಬ್ದಾರಿಗಳನ್ನು ನೀಡಲಾಗುವುದೆಂದು ತಿಳಿಸಿದರು .

ಪತ್ರಿಕಾ ಗೋಷ್ಠಿಯಲ್ಲಿ ದ. ಕ. ಮಹಾ ಮಂಡಲ ಅಧ್ಯಕ್ಷರಾದ ಆನಂದ ಶೆಟ್ಟಿ ಅಡ್ಯಾ‌ರ್, ಸಂಸ್ಥಾನದ ವಕ್ತಾರ ಕೆ ರಾಜೇಶ್ ಶೆಟ್ಟಿ ಶಬರಿ, ಭಾಸ್ಕರ ಚಂದ್ರ ಶೆಟ್ಟಿ, ಮಹಾ ಮಂಡಲ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಕಂಫರ್ಟ್, ಮಂಗಳೂರು ಮಂಡಲದ ಗೌರವಾಧ್ಯಕ್ಷ ನಿಟ್ಟೆಗುತ್ತು ರವಿರಾಜ್ ಶೆಟ್ಟಿ , ಸದಸ್ಯರಾದ ವಿಜಯ ಶೆಟ್ಟಿ ಉಪಸ್ಥಿತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!