ಮಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲೇ ಬಾರದು, ಹಾಗಿದ್ದರೆ ಮಾತ್ರ ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಭೋಜೇ ಗೌಡ ಹೇಳಿದರು .
ಅವರು ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಭಾನುವಾರ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಕುಷ್ಮಾ ಇದರ ದ.ಕ. ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ , ಐಎಎಸ್ , ಐಪಿಎಸ್ ಅಧಿಕಾರಿಗಳು ತಾವು ಕೂಡ ತಳಮಟ್ಟದ ಇಂತಹ ಶಿಕ್ಷಣ ಸಂಸ್ಥೆಗಳಿಂದಲೇ ಮೇಲೆ ಬಂದಿರುವುದನ್ನು ಮರೆಯಬಾರದು. ಆಡಳಿತ ಭಾಷೆ ಕನ್ನಡ ಮಾಡುತ್ತೇವೆ ಎನ್ನುವ ಮುಖ್ಯಮಂತ್ರಿಗಳು ಬಾಯಾತಿನಲ್ಲಿ ಹೇಳಿದರೆ ಸಾಲದು, ಅದಕ್ಕೆ ಪೂರಕ ವ್ಯವಸ್ಥೆ ಮಾಡಿಕೊಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಜೊತೆ ಸಂಸ್ಕಾರ, ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡಬೇಕು , ಶಿಕ್ಷಣ ಸಂಸ್ಥೆಯಲ್ಲಿ ಏನಾದರೂ ಘಟನೆ ನಡೆದಿರುತ್ತೆ ಅದನ್ನು ದೊಡ್ಡ ವೈಫಲ್ಯವಾಗಿ ಬಿಂಬಿಸಬಾರದೆಂದು ತಿಳಿಸಿದರು .
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ರಾಜೇಶ್ವರಿ ಎಚ್.ಎಚ್ , ಕುಷ್ಮಾ ರಾಜ್ಯ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಬಿ.ಪುರಾಣಿಕ್ , ರಾಜ್ಯ ಸಮಿತಿ ಅಧ್ಯಕ್ಷ ಡಾ.ಮೋಹನ ಆಳ್ವ , ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಯುವರಾಜ್ ಜೈನ್ , ಕಾರ್ಯದರ್ಶಿಗಳಾದ ಡಾ.ಮಂಜುನಾಥ ಎಸ್ ರೇವಣ್ಕರ್ ಮುಂತಾದವರು ಉಪಸ್ಥಿತರಿದ್ದರು .