ಮಂಗಳೂರು: ಮಾನ್ಯತೆ ಇಲ್ಲದ ಚೆಕ್ ನೀಡಿ ,ಹಣ ಪಾವತಿಸದೇ ಬೆಲೆಬಾಳುವ ವಸ್ತುಗಳನ್ನು ಖರೀದಿಸಿ ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ದೂರು ನೀಡಿದ ಜಯರಾಯ ಅವರು ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡಿದ್ದು ಎಲ್ಲಾ ಕಂಪನಿಗಳ ಲ್ಯಾಪ್ ಟಾಪ್ ಗಳನ್ನು ಸೇಲ್ಸ್ ಮತ್ತು ಸರ್ವೀಸ್ ಮಾಡಿಕೊಂಡಿದ್ದರು.ಈ ಶಾಪ್ ನಿಂದ ಲ್ಯಾಪ್ ಟಾಪ್ ಗಳನ್ನು ಆರೋಪಿತೆ ಫರಿಧಾ ಬೇಗಂ ತನ್ನ ಪರಿಚಯದ ವ್ಯಕ್ತಿಯ ಮೂಲಕ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಖರೀದಿಸಿದ್ದರು. ದೂರುದಾರರಿಗೆ ಒಟ್ಟು ರೂ 1,98,000/- ರೂಪಾಯಿಯ ಹಣವನ್ನು ಪಾವತಿಸದೇ ಮೋಸ ಮಾಡಿದ್ದರು.