ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ – ಸರಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಂ ಎಲ್ ಸಿ ಐವನ್ ಡಿಸೋಜಾ ಭರವಸೆ .

ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆ ಗೆ ಸಂಬಂದಿಸಿದ ವಿಷಯವಾಗಿ ಇಂದು ಮಾನ್ಯ ಗ್ರಹಸಚಿವರಾದ ಜಿ ಪರಮೇಶ್ವರ್ ಅವರಿಗೆ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಅವರ ಮುಖಾಂತರ ಕಾರ್ಕಳದ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ನಮ್ಮ ಮನವಿಗೆ ಸ್ಪಂದಿಸಿ ಐವನ್ ಡಿಸೋಜಾ ರವರು ಕೂಡಲೆ ಗ್ರಹ ಸಚಿವರಿಗೆ ಕರೆ ಮಾಡಿ ವಾಸ್ತವತೆಯನ್ನು ಮನವರಿಕೆ ಮಾಡಿದರು. ತಕ್ಷಣ ಸ್ಪಂದಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಮತ್ತು ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು.


ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಶ್ರೀ ಉದಯ್ ಜಿ ಆಚಾರ್ಯ, ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಅರ್ಚನಾ ಆಚಾರ್ಯ ಮತ್ತು ಸಮಾಜದ ಇತರ ವ್ಯಕ್ತಿಗಳು ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!