ಆಟೋ ಚಾಲಕನ ಮೇಲೆ ಸಂಚಾರಿ ಪೊಲೀಸರ ದರ್ಪ; ಪುತ್ತೂರಿನಲ್ಲಿ ಆಟೋ ಚಾಲಕರ ಯೂನಿಯನ್ ಪ್ರತಿಭಟನೆ .

ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆಗೆ ಸಂಬಂಧಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಇಬ್ಬರು ಸಂಚಾರಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯ್ತು. ಆಟೋ ಚಾಲಕ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!