ಅಮೃತ ಪ್ರಕಾಶ ಪತ್ರಿಕೆ 45ನೇ ಸರಣಿ ಕೃತಿ ಬಿಡುಗಡೆ .

ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಇದರ ವತಿಯಿಂದ ನಡೆಯುವ ಅಮೃತ ಪ್ರಕಾಶ 45ನೇ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ ಯವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ಸ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರ ಕಥಾ ಪುಸ್ತಕ ಕನ್ನಡ, ಇಂಗ್ಲೀಷ್, ಅರೆಭಾಷೆ ಮತ್ತು ತಮಿಳು 4 ಭಾಷೆಗಳಲ್ಲಿ ಮುದ್ರಣವಾಗಿದ್ದು ಈ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ಇಂದು ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾನಂದ ಗೌಡ ಮಾವಜಿ ವಹಿಸುವರು. ಮಂಗಳೂರು ಕೊಡವ ಸಮಾಜದ ಉಪಾಧ್ಯಕ್ಷೆ ಶ್ರೀಮತಿ ಬೊಳ್ಳಿಯಂಡ ಕೃತಿ ಸೋಮಯ್ಯ ಕೃತಿ ಬಿಡುಗಡೆ ಗೊಳಿಸಲಿರುವರು. ಕೃತಿಯ ಲೇಖಕ ಮತ್ತು ವಿನ್ಯಾಸಗಾರ, ಅಮೃತ ಪ್ರಕಾಶದ ಉಪಸಂಪಾದಕ ಶ್ರೀ ಬಿ. ಕೆ.ಗಣೇಶ್ ರೈ, ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿರುವರು. ಡಾ. ಪ್ರಿಯಾ ಹರೀಶ್ ವಾರ್ತಾವಾಚಕಿ ನಮ್ಮ ಕುಡ್ಲ ವಾಹಿನಿ ಕಾರ್ಯಕ್ರಮ ನಿರೂಪಣೆ ಮಾಡಲಿರುವರು.

SHARE
Loading spinner

Leave a Reply

Your email address will not be published. Required fields are marked *

error: Content is protected !!