ಮಂಗಳೂರು: ಅಶ್ರಫ್ ಗುಂಪು ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಮಂಗಳೂರಿಗೆ ಹೊರವಲಯದ ಕುಡುಪು ಬಳಿ ಎಪ್ರಿಲ್ 27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ಮನೀಶ್ ಶೆಟ್ಟಿ ಮತ್ತು ಅನಿಲ್ ಕುಮಾರ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.