ನಾಳೆ ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಉದ್ಘಾಟನೆ

ಕರ್ನಾಟಕ ರಾಜ್ಯ ಮರಾಟ ಒಕ್ಕೂಟ ಮಂಗಳೂರು ಇದರ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭವು ನ.16ರಂದು ಪುತ್ತೂರಿನ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ನೂತನ ಒಕ್ಕೂಟವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ರಾಜ್ಯ ಮರಾಟಿ ಒಕ್ಕೂಟದ ಗೌರವಾಧ್ಯಕ್ಷ, ಭಾರತ ಸರಕಾರದ ಕೇಂದ್ರಾ ಡಳಿತ ಪ್ರದೇಶ ಮತ್ತು ಚಂಡೀಗಡದ ಮುಖ್ಯ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್‌ರನ್ನು ಅಭಿನಂದಿಸಿ ಗೌರವಿಸಲಾಗುವುದು. ಕಾರ್ಯಕ್ರಮವು ಬೆಳಗ್ಗೆ 9:30ಕ್ಕೆ ಆರಂಭಗೊಳ್ಳಲಿದ್ದು ರಾಜ್ಯ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಮತ್ತು ಕೃಷ್ಣ ರಾಜ್ ಅವರಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟದ ಉಪಾಧ್ಯಕ್ಷಎನ್‌.ಎಸ್‌. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ವಾಸು ನಾಯ್ಕ, ಜಿಲ್ಲಾಧ್ಯಕ್ಷ ಸುಂದರ ನಾಯ್ಕ ವಿಟ್ಲ ಮುಂತಾದವರು ಉಪಸ್ಥಿತತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!