ನ.23ರಂದು ‘ಅಸ್ಮಿತಾ’ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ

ಮಂಗಳೂರು: ರಾಜ್ಯಮಟ್ಟದ ಖೇಲೋ ಇಂಡಿಯಾ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ ಅಸ್ಮಿತಾ’ ನ.23ರಂದು ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ದ.ಕ. ಕಿಕ್ ಬಾಕ್ಸಿಂಗ್ ಅಸೋಸಿಯೇಶನ್‌ನ ಚೇರ್‌ಮ್ಯಾನ್ ಸತ್ಯಜಿತ್ ಸುರತ್ಕಲ್ ತಿಳಿಸಿದರು .

ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕ್ರೀಡಾಕೂಟವನ್ನು ಬೆಳಗ್ಗೆ 9ಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದು ಫಾದರ್ ಮುಲ್ಲ‌ರ್ ಸಂಸ್ಥೆಯ ಆಡಳಿತಾಧಿಕಾರಿ ರೆ.ಫಾ. ಮೈಕಲ್ ಸಾಂತುಮಯೋರ್ ಆಶೀರ್ವಚನ ನೀಡಲಿದ್ದಾರೆ ಎಂದರು .

ದ.ಕ. ಜಿಲ್ಲೆಯ 150 ಮಂದಿ ಸೇರಿದಂತೆ ಒಟ್ಟು 300 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಖೇಲೋ ಇಂಡಿಯಾದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆ ನಡೆಸುವ ಅವಕಾಶ ದ.ಕ. ಸಂಸ್ಥೆಗೆ ದೊರೆತಿದೆ ಎಂದು ಸತ್ಯಜಿತ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಶನ್ ಅಧ್ಯಕ್ಷ ನಿತಿನ್ ಎನ್. ಸುವರ್ಣ, ಕಾರ್ಯದರ್ಶಿ ಸಂಪತ್ ಕುಮಾರ್, ಐಕೆಎಂಎ ಶಿಕ್ಷಕ ಶಿವಪ್ರಸಾದ್, ಸದಸ್ಯ ನಿರಂಜನ್ ಎಂ., ಅಂತರ್‌ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಆಟಗಾರ ರಾಜೇಶ್ ಕೆ. ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!