ಉಡುಪಿ:ಯಸ್ ಬಿ ಗ್ರೂಪ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ ‘ಪಿಲಿಪಂಜ’ ತುಳು ಸಿನಿಮಾ ಡಿಸೆಂಬರ್ 12ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಭರತ್ ಶೆಟ್ಟಿ ತಿಳಿಸಿದರು.
ಈ ಕುರಿತು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಲಿಪಂಜ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ ಸಿನಿಮಾನ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಬೆಳ್ತಂಗಡಿಯಲ್ಲಿ ಭಾರತ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಮುಡಿಪುವಿನಲ್ಲಿ ಭಾರತ ಸಿನಿಮಾಸ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದರು.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರವಿ ರಾಮಕುಂಜ, ರೂಪಶ್ರೀ ವರ್ಕಾಡಿ, ರಂಜನ್ ಬೋಳೂರು, ರಾಜ್ ಪ್ರಕಾಶ್ ಶೆಟ್ಟಿ, ಪ್ರತೀಕ್ ಯು ಪೂಜಾರಿ, ಪ್ರವೀಣ್ ಕೊಡಕ್ಕಲ್, ಜಯಶೀಲ, ಭಾಸ್ಕರ್ ಮಣಿಪಾಲ, ರಾಧಿಕಾ ಉಡುಪಿ ಮೊದಲಾದವರು. ಅಭಿನಯಿಸಿದ್ದಾರೆ. ಉದಯ್ ಬಳ್ಳಾಲ್ ಛಾಯಾಗ್ರಹಣ, ಸಂಕಲನ ಶ್ರೀನಾಥ್ ಪವಾರ್ ಹಾಗೂ ಎಲ್ ವಿ ಯಸ್ ಅವರ ಸಂಗೀತ ಚಿತ್ರಕ್ಕಿದೆ. ಸುರೇಶ್ ಬಲ್ಮಠ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ಪ್ರತೀಕ್ ಯು. ಪೂಜಾರಿ ಕಾವೂರು, ಕಲಾವಿದರಾದ ರಮೇಶ್ ರೈ ಕುಕ್ಕುವಳ್ಳಿ, ಭಾಸ್ಕರ್ ಮಣಿಪಾಲ, ರಾಧಿಕಾ ಉಡುಪಿ ಇದ್ದರು.